BREAKING : ಇಂದು ಬೆಳ್ಳಂಬೆಳಗ್ಗೆ ಬೆಳಗಾವಿ ಸೇರಿದಂತೆ ರಾಜ್ಯದ ಹಲವಡೆ “ಲೋಕಾಯುಕ್ತ” ದಾಳಿ..!!
ಬೆಳಗಾವಿ : ರಾಜ್ಯದಲ್ಲಿ ಬೆಳಗಾವಿ ಸೇರಿದಂತೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು, ಹಲವು ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಬೆಳಗಾವಿ ಹಾಗೂ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಪಿಡಿಒ ಎಸ್.ಪಿ. ಹಿರೇಮಠ್ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸ ಹಾಗೂ ಕಚೇರಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಮನೆ ಮೇಲೆ ದಾಳಿ ಮಾಡಲಾಗಿದೆ ಎಂಬ ಮಾಹಿತಿ ಇದೆ.
ಅದೇ ರೀತಿಯಲ್ಲಿ ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.