BREAKING : ರಾಜ್ಯಪಾಲ ಗೆಹ್ಲೋಟ್ ಅವರಿಂದ  ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ!! : ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್..!!

You are currently viewing BREAKING : ರಾಜ್ಯಪಾಲ ಗೆಹ್ಲೋಟ್ ಅವರಿಂದ  ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ!! : ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್..!!

ಪ್ರಜಾವೀಕ್ಷಣೆ ನ್ಯೂಸ್‌ ಡೆಸ್ಕ್‌ :

BREAKING : ರಾಜ್ಯಪಾಲ ಗೆಹ್ಲೋಟ್ ಅವರಿಂದ  ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ!! : ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್..!!

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ಹೊರಡಿಸಲು ಸಿದ್ದತೆ ನಡೆಸಿತ್ತು. ಆದರೆ, ಈ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ಹಲವು ಸ್ಪಷ್ಟನೆ ಕೇಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ​ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

“ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಅತೀವ ಗಮನ ನೀಡಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಹೆಚ್ಚು ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ‌ ಹೇಗೆ ಹಾಕುತ್ತೀರಾ” ಎಂದು ರಾಜ್ಯಪಾಲ ಗೆಹ್ಲೋಟ್ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಹಾಗಾಗಿ ಮುಂಬರುವ ಬಜೆಟ್ ಅಧಿವೇಶನದಲ್ಲಿ ಸಾದಕ-ಬಾಧಕ ಚರ್ಚಿಸಿ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರುವುದರಿಂದ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ” ಎಂದು ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ.

Leave a Reply

error: Content is protected !!