Post Views: 290
ಪ್ರಜಾವೀಕ್ಷಣೆ ನ್ಯೂಸ್ ಡೆಸ್ಕ್ :
LOCAL NEWS ; ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಾವು ನೀವು ಜೊತೆಯಾಗಿ ಶ್ರಮಿಸೋಣ’ ಎಂದು ಶಾಸಕ ಡಾ.ಚಂದ್ರು ಕೆ. ಲಮಾಣಿ

ಶಿರಹಟ್ಟಿ : ‘ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಾವು ನೀವು ಜೊತೆಯಾಗಿ ಶ್ರಮಿಸೋಣ’ ಎಂದು ಶಾಸಕ ಡಾ.ಚಂದ್ರು ಕೆ. ಲಮಾಣಿ ಹೇಳಿದರು.
ಇಂದು ಶಿರಹಟ್ಟಿ ತಾಲೂಕಿನ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಡಾ.ಚಂದ್ರು ಕೆ. ಲಮಾಣಿ ನೇತೃತ್ವದಲ್ಲಿ ತಾಲೂಕು ಪಂಚಾಯತ್ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆ.ಡಿ.ಪಿ) ಪ್ರಗತಿ ಪರಿಶೀಲನ ಸಭೆ ನಡೆಯಿತು.
ಈ ಸಭೆ ಕುರಿತು ಮಾತನಾಡಿದ ಅವರು, ‘ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಾವು ನೀವು ಜೊತೆಯಾಗಿ ಶ್ರಮಿಸೋಣ ವಿಶೇಷವಾಗಿ ಕೃಷಿ, ಆರೋಗ್ಯ, ಶಿಕ್ಷಣ, ಪಿ.ಡಬ್ಲೂ.ಡಿ, ಪಿ.ಆರ್.ಇ, ಸೇರಿದಂತೆ ಇನ್ನುಳಿದ ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.
ಜೊತೆಗೆ ಎಲ್ಲಾ ಇಲಾಖೆಯ ಪ್ರಗತಿ ಕುರಿತು ಸಮಗ್ರವಾಗಿ ಚರ್ಚಿಸಿ ಇನ್ನೂ ಸುಧಾರಣೆಗಾಗಿ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ ಅನಿಲ ಬಡಿಗೇರ, ತಾಪಂ ಇಒ ರಾಮಣ್ಣ ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಯ ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸೇರಿದಂತೆ ಹಲವರು ಉಪಸ್ಥಿತರಿದ್ದರು.