BREAKING : ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ.! : ರಾಜ್ಯಪಾಲರ ಅಂಕಿತ..!

You are currently viewing BREAKING : ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ.! : ರಾಜ್ಯಪಾಲರ ಅಂಕಿತ..!

ಪ್ರಜಾವೀಕ್ಷಣೆ ನ್ಯೂಸ್‌ ಡೆಸ್ಕ್‌ :

BREAKING : ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ.! : ರಾಜ್ಯಪಾಲರ ಅಂಕಿತ..!

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು, ಈ ಕಾರಣಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆಯನ್ನು ಇಂದು ರಾಜ್ಯಪಾಲರ ಅಂಕಿತ ಹಾಕಿದ್ದಾರೆ.

ಇಂದು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಹಾಕಿ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ದೊಂಬರಾಟ ಈ ಸುಗ್ರೀವಾಜ್ಞೆ ಜಾರಿ ಮೂಲಕ ನಿಲ್ಲಲಿದೆ.

ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ಕೇಲವು ಸ್ಪಷ್ಟನೆ ಕೇಳಿ ವಾಪಾಸ್ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಲಾಗಿತ್ತು.

ಈ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿತ್ತು. ಈ ಸ್ಪಷ್ಟೀಕರಣದೊಂದಿಗೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಮರು ರವಾನೆ ಮಾಡಲಾಗಿತ್ತು. ಸರ್ಕಾರದಿಂದ ಕಳುಹಿಸಲಾಗಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆ ಜಾರಿಗೊಂಡಿದೆ.

Leave a Reply

error: Content is protected !!