Local news : ಇಂದು ಶಿವಶಾಂತವೀರ ಮಹಾಶಿವಯೋಗಿಗಳ 22ನೇ ಪುಣ್ಯರಾಧನೆ!
ಕೊಪ್ಪಳ : ಸಂಸ್ಥಾನ ಶ್ರೀಗವಿಮಠದ ಮ ನಿ ಪ್ರ ಜ ಲಿಂ. ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯರಾಧನೆ ನಿಮಿತ್ಯ ದಿನಾಂಕ 23.03.2025ರಂದು ಬೆಳಿಗ್ಗೆ 6:00 ಗಂಟೆಗೆ ಪರಮಪೂಜ್ಯ ಶ್ರೀ.ಮ.ನಿ.ಪ್ರ.ಜ.ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಶ್ರೀ ಮಳೆಮಲ್ಲೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಪ್ರಾರಂಭವಾಗಿ ಅಶೋಕ್ ಸರ್ಕಲ್ ಹಾಗೂ ಗಡಿಯಾರ ಕಂಬದ ಮುಖಾಂತರ ಶ್ರೀ ಗವಿಮಠಕ್ಕೆ 9:00ಗಂಟೆಗೆ ತಲುಪಿತು. ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು, ವಿದ್ಯಾರ್ಥಿಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಪಾದಯಾತ್ರೆಯ ನಂತರ ಶ್ರೀ ಗವಿಸಿದ್ಧೇಶ್ವರ ಕತೃ ಗದ್ದುಗೆ ಹಾಗೂ ಶ್ರೀ ಶಿವಶಾಂತವೀರ ಮಹಾಸ್ವಾಮಿಗಳ ಗದ್ದುಗೆಯ ದರ್ಶನ ಪಡೆದು ಧನ್ಯರಾದರು. ಶ್ರೀಮಠದ ದಾಸೋಹದಲ್ಲಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಭಕ್ತಾಧಿಗಳು ಪ್ರಸಾದವನ್ನು ಸ್ವೀಕರಿಸಿದರು ಎಂದು ಶ್ರೀ ಗವಿಮಠದ ಪ್ರಕಟಣೆಯಲ್ಲಿ ತಿಳಿಸಿದೆ.