ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರೋಬ್ಬರಿ ಇನ್ನು 3 ದಿನ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಭಾಗದ ಎಲ್ಲ ಜಿಲ್ಲೆಗಳು ಹಾಗೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಸೇರಿ ಎಲ್ಲ ಜಿಲ್ಲೆಗಳಲ್ಲಿ ಮುಂಬರುವ ಎರಡ ರಿಂದ ಮೂರು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಹಾವೇರಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಶನಿವಾರ (ಏಪ್ರಿಲ್ 08) ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬೆಳಗಾವಿಯ ಗೋಕಾಕ್ ನಲ್ಲಿ 5 ಸೆಂ.ಮೀ ಮಳೆಯಾಗಿದೆ. ಬೆಳಗಾವಿಯ ಬೈಲಹೊಂಗಲ, ಬೀದರ್ ನಲ್ಲಿ ತಲಾ 4 ಸೆಂ.ಮೀ. ಉತ್ತರ ಕನ್ನಡದ ಮುಂಡಗೋಡ, ಗದಗದ ನರಗುಂದ, ಬೆಳಗಾವಿ, ಕಲಬುರಗಿಯಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ ಎಂದು ವರದಿಯಾಗಿದೆ.