ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಗುಂಜಳ್ಳಿ ಹೀರೆ ನಾಗಪ್ಪ ವಾಣಿಜ್ಯ ಮಹಾವಿದ್ಯಾಲಯ, ಶ್ರೀ ಕೊಟ್ಟೂರೇಶ್ವರ ಕ್ಯಾಂಪಸ್ ಗಂಗಾವತಿ ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏಪ್ರಿಲ್ 17 ರಂದು ಬೆಳಿಗ್ಗೆ 10 ಗಂಟೆಯಿಂದ 4ರ ವರೆಗೆ ಗಂಗಾವತಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಬೃಹತ್ ಉದ್ಯೋಗ ಮೇಳದಲ್ಲಿ ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಹಾಸನ, ಶಿವಮೊಗ್ಗ ಇತರೆ ಭಾಗಗಳ ಪ್ರತಿಷ್ಟಿತ ಕಂಪನಿಗಳು ಭಾಗವಹಿಸುತ್ತವೆ. ಈ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿಯುಸಿ/ ತತ್ಸಮಾನ, ಐ.ಟಿ.ಐ, ಡಿಪ್ಲೊಮಾ, ಕಂಪ್ಯೂಟರ್ ತರಬೇತಿ ಹಾಗೂ ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ, ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹಾಗೂ ವಿಕಲಚೇತನ ಅಭ್ಯರ್ಥಿಗಳು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 10 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ(ರೆಜ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ ಕೊಪ್ಪಳ, ಮೊ. ನಂ: 9353515518 ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.