Local News : ಏ. 14ರಂದು ಡಾ. ಬಿ. ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ

ಏ. 14ರಂದು ಕೊಪ್ಪಳ ದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮ 

ಏ. 14 ರಂದು ಕೊಪ್ಪಳದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆ

 

ಕೊಪ್ಪಳ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏಪ್ರಿಲ್ 14 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.

 ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.

 ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸಬವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ ಅವರು ಭಾಗವಹಿಸುವರು.

 ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೇಜರ್ ಪಿ.ಮಣಿವಣ್ಣನ್, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾದ ಡಾ. ರಾಕೇಶ್‌ಕುಮಾರ್ ಕೆ. ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಕಲಬುರಗಿಯ ಬರಹಗಾರಾದ ಡಾ. ವಿಠ್ಠಲ್ ವಗ್ಗನ್ ಅವರು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ ಕುರಿತು ವಿಶೇಷ ಉಪನ್ಯಾಸ ನೀಡುವರು.

 

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಕೊಪ್ಪಳ ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ್ ಅವರು ಉಪಸ್ಥಿತರಿರುವರು. 

ಕಾರ್ಯಕ್ರಮದ ನಿಮಿತ್ತ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರದ ಮೆರವಣಿಗೆಯು ಅಂದು ಬೆಳಿಗ್ಗೆ 8 ಗಂಟೆಗೆ ತಹಶೀಲ್ದಾರ ಕಛೇರಿಯಿಂದ ಸಾಲಾರಜಂಗ್ ರಸ್ತೆ, ಅಶೋಕ ವೃತ್ತದ ಮೂಲಕ ಸಾಹಿತ್ಯ ಭವನದವರೆಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!