“ನಾಳೆ ಕಲಬುರಗಿಯಲ್ಲಿ ಉದ್ಯೋಗ ಮೇಳ : ಉದ್ಯೋಗಾಂಕ್ಷಿಗಳಿಗೆ ವಿಶೇಷ ಬಸ್ಸಿನ ವ್ಯವಸ್ಥೆ “
ಕಲಬುರಗಿ : ನಗರದ ಕೆಸಿಟಿ ಕಾಲೇಜಿನ ಆವರಣದಲ್ಲಿ ನಾಳೆ ಏ .16 ರಂದು ನಡೆಯುವ ಉದ್ಯೋಗ ಮೇಳಕ್ಕೆ ಕಲಬುರಗಿ ವಿಭಾಗದ ವಿವಿಧ ಜಿಲ್ಲಾ-ತಾಲೂಕು ಕೇಂದ್ರಗಳಿಂದ ಉದ್ಯೋಗ ಆಕಾಂಕ್ಷಿಗಳು ಆಗಮಿಸಲು ಅನುಕೂಲವಾಗುವಂತೆ ಹೆಚ್ಚುವರಿ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಕಲಬುರಗಿ ವಿಭಾಗ-2ರ ನಿಯಂತ್ರಣಾಧಿಕಾರಿ ಎಸ್.ಜಿ.ಗಂಗಾಧರ ಅವರು ತಿಳಿಸಿದ್ದಾರೆ.
ಈ ವಿಭಾಗ-2 ವ್ಯಾಪ್ತಿಯಲ್ಲಿ ಬರುವ ಆಳಂದ, ಜೇವರ್ಗಿ, ಅಫಜಲಪೂರ, ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ಅವಶ್ಯಕತೆಗನುಗುಣವಾಗಿ ಹೆಚ್ಚುವರಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಸದರಿ ಸಾರಿಗೆಗಳನ್ನು ಸದುಪಯೋಗೋಗಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ ವಿವರ ಇಂತಿದೆ : ಕಲಬುರಗಿ ಕೇಂದ್ರ ಬಸ್ ನಿಲ್ದಾಣ ನಿಲ್ದಾಣಾಧಿಕಾರಿಗಳ ಮೊಬೈಲ್ ಸಂಖ್ಯೆ-9686976451