ಕರ್ನಾಟಕ ವಿಧಾನಸಭಾ ಚುನಾವಣೆ 2023ಗಾಗಿ ಇಂದು ಕೇಂದ್ರ ಚುನಾವಣಾ ಸಮಿತಿ (CEC) ಸಭೆಯನ್ನು ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪ್ರಧಾನ ಕಚೇರಿಯಿಂದ ನಿರ್ಗಮಿಸಿದ್ದಾರೆ. ಭಾರೀ ಕುತೂಹಲ ಕೆರಳಿಸಿರುವ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಇನ್ನು ಕೆಲವೇ ಕ್ಷಣಗಳಲ್ಲಿ ಹೊರಬೀಳುವ ಸಾಧ್ಯತೆ ಇದೆ ಎಂದು ಮಾಹಿತಿ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದಿತ್ತು. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ರಾಜ್ಯದ ಪ್ರಮುಖ ನಾಯಕರು ಬಿಜೆಪಿ ಕೇಂದ್ರೀಯ ಚುನಾವಣಾ ಸಭೆಯಲ್ಲಿ ಪಾಲ್ಗೊಂಡಿದ್ದರು.