Video Player
00:00
00:00
ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಕುರಿತು ಇಂದು ಕೇಂದ್ರ ಚುನಾವಣಾ ಸಮಿತಿ (CEC) ಸಭೆ ನಡದಿತ್ತು. ಈ ಸಭೆ ಮುಗಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ‘ಕರ್ನಾಟಕ ಚುನಾವಣೆಯ ಒಟ್ಟಾರೆ ಪಟ್ಟಿಯನ್ನು ನಾವು ಚರ್ಚಿಸಿದ್ದೇವೆ. ನಾಳೆ ಮತ್ತೆ ಈ ಪಟ್ಟಿಯನ್ನು ನೋಡಿ ಪರಿಶೀಲಿಸಿ ನಾಳೆ ಅಥವಾ ನಾಡಿದ್ದು, ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ನಾನು ಈ ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ’ ಎಂದು ಎಎನ್‌ಐ ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದಾರೆ. ಈ ಕುತೂಹಲಕ್ಕೆ ತೆರೆ ಬೀಳಲಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದಿತ್ತು. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ರಾಜ್ಯದ ಪ್ರಮುಖ ನಾಯಕರು ಬಿಜೆಪಿ ಕೇಂದ್ರೀಯ ಚುನಾವಣಾ ಸಭೆಯಲ್ಲಿ ಪಾಲ್ಗೊಂಡಿದ್ದರು.