ಕುಕನೂರು : ಯಲಬುರ್ಗಾ ಕ್ಷೇತ್ರದ ಜನ 2023ರ ವಿಧಾನಸಭಾ ಚುನಾವಣೆಯಲ್ಲಿ ಬದಲಾವಣೆಯನ್ನು ಬಯಸಿದ್ದಾರೆ, ಹೀಗಾಗಿ ದಿನದಿಂದ ದಿನಕ್ಕೆ ಜನ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ, ಎಂದು ಎನ್ ಸಿ ಪಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಯಲಬುರ್ಗಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿಯಾದ ಆರ್ ಹರಿ ಹೇಳಿದರು.
ಕುಕನೂರು ತಾಲೂಕಿನಲ್ಲಿ ರವಿವಾರ ಎನ್ ಸಿ ಪಿ ವತಿಯಿಂದ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ 15 ಗ್ರಾಮದಲ್ಲಿ ಸುಮಾರು ಜನ ಎನ್ ಸಿ ಪಿ ಪಕ್ಷ ಸೇರ್ಪಡೆಗೊಂಡ ಕಾರ್ಯಕಾರ್ಯರನ್ನು ಸ್ವಾಗತಿಸಿಕೊಂಡು ಮಾತನಾಡಿದ ಅವರು ಯಲಬುರ್ಗಾ ಕ್ಷೇತ್ರದಲ್ಲಿ ರಾಜಕೀಯ ಜಿಡ್ಡು ಹಿಡಿದಿದೆ, ಈಗಿರುವ ಹಾಲಿ ಮತ್ತು ಮಾಜಿ ಮಂತ್ರಿಗಳು ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ, ಇವರುಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಾಗಿ ಕ್ಷೇತ್ರದ ಜನ ಬದಲಾವಣೆ ಬಯಸಿ ಎನ್ ಸಿ ಪಿ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದ ಅವರು ಯಲಬುರ್ಗಾ ಕ್ಷೇತ್ರದಿಂದ ಎನ್ ಸಿ ಪಿ ಪಕ್ಷ ಪ್ರಚಂಡ ಬಹುಮತದಿಂದ ಗೆಲವು ಸಾಧಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ: ಆರ್ ಹರಿ
