ನವದೆಹಲಿ : ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ನಿನ್ನೆ ದೆಹಲಿಯಲ್ಲಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯಿಂದ ಮಹತ್ವದ ಸಭೆ ನಡೆದಿದ್ದು, ಇಂದು ಮಧ್ಯಾಹ್ನ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
ಇಂದು ಮಧ್ಯಾಹ್ನ ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿರುವ ಬಿಜೆಪಿ ನಾಯಕರು ರಾಜ್ಯದ 175 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಭಾನುವಾರ (ಏಪ್ರಿಲ್ 9) ಸಂಜೆ ದೆಹಲಿಯಲ್ಲಿ ಬರೋಬ್ಬರಿ 2 ಗಂಟೆಗಳ ಕಾಲ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಆದರೆ ಪಟ್ಟಿಯನ್ನು ಅಂತಿಮಗೊಳಿಸಲು ಸಾಧ್ಯವಾಗಲ್ಲಿ ಎಂದು ಮಾಹಿತಿದೆ. ಹೀಗಾಗಿ ಇಂದು ಮತ್ತೊಮ್ಮೆ ಪಕ್ಷದ ಪ್ರಮುಖ ನಾಯಕರ ಸಭೆ ನಡೆಸಿ, 175 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.