ಬೆಂಗಳೂರು : ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಡುವೆ ಕಾದಾಟ ನಡೆಯಲಿದ್ದು. ಈ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳು ಹೆಚ್ಚಾಗಿ ಸೇರುವುದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗುವ ಸಂಭವವಿದ್ದು, ಹಾಗಾಗಿ ಸುಗಮ ಸಂಚಾರಕ್ಕಾಗಿ ನಗರ ಸಂಚಾರ ಪೊಲೀಸ್ ಇಲಾಖೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿದೆ. ಇಂದು ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಮಾರ್ಗ ಬದಲಾವಣೆಯಿರಲಿದ್ದು, ಬಳಿಕ ಎಂದಿನಂತೆ ಎಲ್ಲಾ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.
ನಗರದ ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ , ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ ಬಾ ರಸ್ತೆ ನೃಪತುಂಗ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.