ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಾಕಿ ಇರುವಂತ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಕುರಿತು, ಇದೀಗ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ಆರಂಭಗೊಂಡಿದೆ. ಈ ಸಭೆಯ ಬಳಿಕ ಬಾಕಿ ಇರುವ 58 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ನವದೆಹಲಿಯ ಜಿಆರ್ ಜಿ ರಸ್ತೆಯಲ್ಲಿರುವ ಕಾಂಗ್ರೆಸ್ ವಾರ್ ರೂಮ್‌ನಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಮಹತ್ವದ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಬಾಕಿ 58 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಾಯಕರು ಮಹತ್ವದ ಚರ್ಚೆ ನಡೆಸಲಿದ್ದಾರೆ.
ಭಾರೀ ಕೂತುಹಲ ಉಂಟಾಗಿದ್ದ ಕೋಲಾರ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಗ್ಗೆಯೂ ಚರ್ಚೆ ನಡೆಯಲಿದ್ದು, ಇದಲ್ಲದೇ ಬೆಂಗಳೂರಿನ ಪುಲಕೇಶಿ ನಗರ ಕ್ಷೇತ್ರಕ್ಕೆ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ನೀಡಬೇಕೋ ಅಥವಾ ಎ ಸಿ ಶ್ರೀನಿವಾಸ್ ಗೆ ನೀಡಬೇಕೋ ಎನ್ನುವ ಬಗ್ಗೆಯೂ ಚರ್ಚ ಜೋರಾಗಿದೆ ಎನ್ನಲಾಗಿದೆ.