ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಕುರಿತು ನಿನ್ನೆ ಕೇಂದ್ರ ಚುನಾವಣಾ ಸಮಿತಿ (CEC) ಸಭೆ ನಡೆದಿತ್ತು. ಇಂದು ಮತ್ತೆ ಬಿಜೆಪಿಯಿಂದ CEC ಸಭೆ ನಡೆದಿದೆ. ಹಾಗಾಗಿ ಇಂದು ರಾತ್ರಿಯೊಳಗೆ ಪಟ್ಟಿ ರಿಲೀಸ್ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಈ ನಡುವೆ ಇಂದು ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಹೈಕಮಾಂಡ್ ಸಭೆ ನಡೆಸಿದೆ.
ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರ ಜೊತೆ ಕೆಲವು ನಿಮಿಷಗಳ ಕಾಲ ಅಧ್ಯಕ್ಷ ಜೆಪಿ ನಡ್ಡಾ ಸಭೆ ನಡೆಸಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ಜೊತೆಗೆ ಟಿಕೆಟ್ ಬಗ್ಗೆ ಹಾಗೂ ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೇವಲ 10 ನಿಮಿಷ ನಡ್ಡಾ ಭೇಟಿಯಾಗಿದ್ದ ಬಿಎಸ್ ಯಡಿಯೂರಪ್ಪ ನವರು, ಕೆಲವು ಕ್ಷೇತ್ರಗಳಲ್ಲಿ ಬೆಂಬಲಿಗರ ಪರ ಯಡಿಯೂರಪ್ಪ ಟಿಕೆಟ್ ವಿಚಾರದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ವೇಳೆಯಲ್ಲಿ ಟಿಕೆಟ್ ನೀಡುವ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರು ಬೇಸರದಲ್ಲೇ ಏರ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ತಿಳಿದು ಬಂದಿದೆ.