ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ IPLನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಲಕ್ನೋ ಸೂಪರ್ ಜೈಂಟ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬ್ಯಾಟಿಂಗ್ ಮಾಡಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ 2 ಪಂದ್ಯಗಳಲ್ಲಿ 1 ಸೋಲು ಒಂದು ಗೆಲುವಿನೊಂದಿಗೆ ಪಾಯಿಂಟ್ ಟೇಬಲ್ನಲ್ಲಿ 7ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ದೊಡ್ಡ ಅಂತರದಲ್ಲಿ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯ ಸಾಧಿಸಿದರೆ 4 ಅಂಕ ಸಂಪಾದಿಸಿ ಮೇಲಕ್ಕೆ ಜಿಗಿಯುವ ಸಾಧ್ಯತೆ ಇದೆ ಎನ್ನಲಾಗಿದೆ.