ನವದೆಹಲಿ : ಮುಂದಿನ ತಿಂಗಳು ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ ಯಾವುದೇ ಗೊಂದಲವಿಲ್ಲ. ಬಹುಶಃ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಇಂದು ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಇಂದು ಸಂಜೆ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚು ಇತ್ತು. ಆದರೆ ಈ ಬಗ್ಗೆ ಸುದೀರ್ಘ ಚರ್ಚೆಗಳು ನಡೆಯಬೇಕಾಗಿರುವುದರಿಂದ, ಅದನ್ನು ಮಂಗಳವಾರ (ಏ.11) ಅಥವಾ ಬುಧವಾರ ( ಏ.12) ಬಿಡುಗಡೆ ಮಾಡಬಹುದು ಎಂದು ತಿಳಿಸಿದರು.
“ಕೆಲವು ಅಭ್ಯರ್ಥಿಗಳಿಗೆ ಹೆಚ್ಚಿನ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಬೇಕಾಗಿತ್ತು, ಹಾಗಾಗಿ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುವ ಅಗತ್ಯೆವಿದೆ. ಇನ್ನೂ ಅನೇಕ ಹೊಸ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಯಬೇಕಾಗಿದೆ” ಎಂದು ಹೇಳಿದರು.
ಒಟ್ಟು 224 ಸದಸ್ಯರ ವಿಧಾನಸಭೆ ಚುನಾವಣೆಗೆ ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ನಾಳೆ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.