ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಗುಡುಗು ಸಹಿತ ಮಳೆಯಾಗಲಿದೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹೇಳಿದೆ.
ಕರಾವಳಿ ವಿಭಾಗದ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಹಾವೇರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.