ಕುಕನೂರು : ಸಾರ್ವಜನಿಕರಲ್ಲಿ ಮತದಾನದ ಮಾಡುವ ಕುರಿತು ಜಾಗೃತಿ ಮೂಡಿಸಲು ನಿಟ್ಟಿನಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು, ತಾಲೂಕ ಸ್ವೀಪ್ ಸಮಿತಿ ಹಾಗೂ ತಾಲೂಕ ಪಂಚಾಯತಿ ವತಿಯಿಂದ ಮೇಣದ ಬತ್ತಿ ಮತ್ತು ಪಂಜಿನ ಮೆರೆವಣಿಗೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ತಾಲೂಕಿನ ಇಟಗಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ೮ ಗಂಟೆಗೆ ಸುಮಾರಿಗೆ ಪಂಜಿನ ಮೆರೆವಣಿಗೆಗೆ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಚಾಲನೆ ನೀಡಿ ಮಾತನಾಡಿದರು.
ಸಾರ್ವತ್ರಿಕ ಚುನಾವಣೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮತದಾನ ಮಾಡಬೇಕು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೆ ಪ್ರಭುಗಳು, ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದರು.
ಮಹಿಳಾ ಸ್ವಸಹಾಯ ಸಂಘದವರು ಗ್ರಾಮ ಪಂಚಾಯತಿ ಆವರಣದಲ್ಲಿ ನಮ್ಮ ಮತ ನಮ್ಮ ಹಕ್ಕು ಎಂಬ ಘೊಷ ವಾಕ್ಯವನ್ನು ಮೇಣದ ಬತ್ತಿಯಲ್ಲಿ ಬೆಳಗಿಸಿ ಜಾಗೃತಿ ಮೂಡಿಸಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶರಣಪ್ಪ ಕೆಳಗಿನಮನಿ ಮತದಾರರ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಪಂಜಿನ ಮೆರವಣಿಗೆ ಮೂಲಕ ಮತದಾನ ಜಾಗೃತಿ : ಇಓ ರಿಂದ ಚಾಲನೆ
