ಬೆಂಗಳೂರು: 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ನ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಆರ್. ಶಂಕರ್ ಶುಕ್ರವಾರ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
2019 ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ, ಆ ಸಂದರ್ಭದಲ್ಲಿ ಬಿಜೆಪಿಯನ್ನು ಬೆಂಬಲಿಸಿದ ಶಾಸಕರಲ್ಲಿ ಆರ್ ಶಂಕರ್ ಕೂಡ ಒಬ್ಬರು. ಆ ಸಂದರ್ಭದ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿತ್ತು.
2023 ವಿಧಾನಸಭೆ ಚುನಾವಣೆಗೆ ಹಾವೇರಿಯ ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಅವರ ಬದಲು ಹಾಲಿ ಶಾಸಕ ಅರುಣ್ ಕುಮಾರ್ ಪೂಜಾರ ಅವರಿಗೆ ಟಿಕೆಟ್ ನೀಡಲಾಗಿತ್ತು. ಬಿಜೆಪಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡು ಪಕ್ಷಕ್ಕೆ ಮತ್ತು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಆರ್. ಶಂಕರ್ ಬಿಜೆಪಿ ತೊರೆದ ಶುಕ್ರವಾರ ಬೆಂಗಳೂರಿನಲ್ಲಿ ಎನ್ಸಿಪಿಯ ರಾಜ್ಯಾಧ್ಯಕ್ಷ ಆರ್. ಹರಿ ನೇತೃತ್ವದಲ್ಲಿ ಎನ್.ಸಿ.ಪಿಗೆ ಸೇರ್ಪಡೆಯಾದರು.ಇದರಿಂದ ಅವರಿಗೆ ರಾಣೇಬೆನ್ನೂರು ಕ್ಷೇತ್ರಕ್ಕೆ ಎನ್.ಸಿ.ಪಿ ಯಿಂದ ಟಿಕೆಟ್ ಸಿಗುವ ಸಾಧ್ಯತೆಗಳಿವೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ ಆರ್. ಶಂಕರ ಬಿಜೆಪಿ ತೊರೆದು ಎನ್.ಸಿ.ಪಿ ಗೆ ಸೇರ್ಪಡೆ.
