ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

You are currently viewing ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಈಗಾಗಲೇ 124 ಕ್ಷೇತ್ರಗಳಿಗೆ ಮೊದಲ ಪಟ್ಟಿ ಹಾಗೂ 2ನೇ ಪಟ್ಟಿ ಬಿಡುಗಡೆ ಮಾಡಲಾಗಿದ್ದು. ಇಂದು 43 ಕ್ಷೇತ್ರಗಳಿಗೆ 3ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ನಿನ್ನೆಯಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೂ ಅಥಣಿ ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಿದೆ.

ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಆಯ್ಕೆಯಾದ ಅಭ್ಯರ್ಥಿಗಳಿಗೆ ಶುಭಾಶಯಗಳನ್ನು ಕೋರುತ್ತೇವೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಅತಿ ಹೆಚ್ಚು ಮತಗಳಿಂದ ಆಯ್ಕೆ ಮಾಡಿ ಸುವರ್ಣ ಕರ್ನಾಟಕದ ವೈಭವವನ್ನು ಮರುಸ್ಥಾಪಿಸಲು ಬೆಂಬಲಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ. ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ ಎಂದು ಟ್ವೀಟ್‌ ಮಾಡಿದೆ.

Leave a Reply

error: Content is protected !!