2023ರ IPLನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹಣಾಹಣಿ ನಡೆಯುತ್ತಿದ್ದು, ಮೊದಲ ಬಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ ಓವರ್‌ನಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಬಾರಿಸಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಗೆ ಸ್ಪರ್ಧಾತ್ಮಕ 175 ರನ್ ಗುರಿ ನೀಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ 50, ಮ್ಯಾಕ್ಸ್‌ವೆಲ್ 24, ಲೋಮರ್ 26 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಕುಲ್‌ದೀಪ್ ಮತ್ತು ಮಾರ್ಶ್ ತಲಾ ಎರಡು ವಿಕೆಟ್ ಪಡೆದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11 : ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ವನಿಂದು ಹಸರಂಗ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಸಿರಾಜ್
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11 : ಡೇವಿಡ್ ವಾರ್ನರ್, ಪೃಥ್ವಿ ಶಾ, ಮನೀಶ್ ಪಾಂಡೆ, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್, ಕುಲದೀಪ್ ಯಾದವ್,ನೋಕಿಯಾ, ರೆಹಮಾನ್.