ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ, ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಪಕ್ಷಾಂತರವಾಗುವುದು ಇದೀಗ ಬಹಳ ಜೋರಾಗಿ ನಡೆಯುತ್ತಿದೆ. ಅದರಲ್ಲೂ ಕೂಡ ಬಿಜೆಪಿಗರು ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬರುತ್ತಿರುವುದು ಆಶ್ಚರ್ಯವೆನಿಸಿದೆ. ಇಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.
ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಜಶೇಖರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಎಂ ಎಲ್ ಸಿ ಹೆಚ್. ವಿಶ್ವನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.