ಬೆಂಗಳೂರು : ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಏಪ್ರಿಲ್ 21 ರಿಂದ ಮೂರು ದಿನ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ಏಪ್ರಿಲ್ 21 ರಿಂದ ಮೂರು ದಿನಗಳ ಕಾಲ ಹಳೆ ಮೈಸೂರು ಭಾಗದಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಹಾಗೆಯೇ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಮಲೆನಾಡು ಭಾಗದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ಈ ವೇಳೆ ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಮಾಹಿತಿ ನೀಡಿದೆ. ಸಮುದ್ರ ಮಟ್ಟದಲ್ಲಿಯ ಹವಾಮಾನ ಕುಸಿತವಾಗಿರುವುದರಿಂದ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಇದೇ ಏಪ್ರಿಲ್ 21 ರಿಂದ ಏಪ್ರಿಲ್ 23ರವರೆಗೆ ಮಳೆಯ ವಾತಾವರಣ ನಿರ್ಮಾಣವಾಗಿದೆ ಹಾಗೂ ಮೊದಲ ದಿನ ಮಳೆ ಸಾಧಾರಣವಾಗಿರಲಿದ್ದು, ಬಳಿಕ ಇನ್ನೂ ಎರಡು ದಿನಗಳು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ಇದೆ.