ಬೆಂಗಳೂರು : ಈ ಬಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭದ ಮೊಒದಲ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲಾ ಆರಂಭದಲ್ಲೇ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಶೇ. 68 ರಷ್ಟು ಸಮವಸ್ತ್ರ ಗೋದಾಮಿಗೆ ತಲುಪಿದೆ ಎಂದು ತಿಳಿದು ಬಂದಿದೆ.
ಇನ್ನುಳಿದ ಶೇ. 33 ರಷ್ಟು ಸಮವಸ್ತ್ರ ಉತ್ಪಾದನೆಯ ಹಂತದಲ್ಲಿದೆ. ಪೂರೈಕೆಗೆ ಮುಂದಿನ ತಿಂಗಳು ಮೇ.2 ನೇ ವಾರ ಗಡುವು ನಿಗದಿಪಡಿಸಲಾಗಿದೆ. ಒಂದು ವೇಳೆ ಗಡುವು ವಿಸ್ತರಣೆಯಾದರೂ ಮೇ. 29ರೊಳಗೆ ಸಂಪೂರ್ಣ ಸಮವಸ್ತ್ರ ಪೂರೈಕೆಯಾಗಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲೀಗ 47,511 ಸರ್ಕಾರಿ ಶಾಲೆಗಳಲ್ಲಿ 1 ರಿಂದ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ 58.15 ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲು 77.46 ಕೋಟಿ ರೂ. ವೆಚ್ಚವಾಗಲಿದೆ. ಈ ಮೊತ್ತದಲ್ಲಿ 1.28 ಕೋಟಿ ಮೀಟರ್ ಬಟ್ಟೆ ಖರೀದಿಗೆ ಶಿಕ್ಷಣ ಇಲಾಖೆ ಈಗಾಗಲೇ ಟೆಂಡರ್ ಕರೆದು ಸಮವಸ್ತ್ರ ಖರೀದಿಸುತ್ತಿದೆ ಎಂದು ಮಾಹಿತಿ ಇದೆ.