ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರದಿಂದ ಎಲ್ಲಾ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಇದೀಗ ಬಿಜೆಪಿಯಿಂದ ಬಾಕಿ ಉಳಿದಿದ್ದ ಇತ್ತೀಚಿಗೆ ಭಾರೀ ಕುತೂಹಲ ಮೂಡಿಸಿದ್ದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇಂದು ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ತೀವ್ರ ಕುತೂಹಲ ಕೆರಳಿಸಿದ್ದಂತ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಚೆನ್ನಬಸಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಪುತ್ರನಿಗೆ ಟಿಕೆಟ್ ನೀಡುವ ನಿರೀಕ್ಷೆಯಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ ಹಾಗೂ ಟಿಕೆಟ್‌ಗಾಗಿ ಬಂಡಾಯವೆದ್ದ ಆಯನೂರು ಮಂಜುನಾಥ್‌ಗೆ ಬಿಗ್ ಶಾಕ್ ನೀಡಿದೆ.
ಇನ್ನೂ ಮಾನ್ವಿ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಬಿ.ವಿ ನಾಯ್ಕ್ ಗೆ ಟಿಕೆಟ್ ನೀಡಲಾಗಿದೆ. ಬಿಜೆಪಿಯಿಂದ ಒಟ್ಟು 224 ಕ್ಷೇತ್ರಗಳಿಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಇದರೊಂದಿಗೆ ಬಿಜೆಪಿಯಿಂದ ಈಗಾಗಲೇ 222 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿತ್ತು. ಆದರೆ ಮಾನ್ವಿ ಮತ್ತು ಶಿವಮೊಗ್ಗ ವಿಧಾನ ಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿರಲಿಲ್ಲ ಬಿಜೆಪಿಯ ಈ ನಡೆ ಭಾರೀ ಕುತೂಲಹಲಕ್ಕೆ ಕಾರಣವಾಗಿತ್ತು. ಇಂದು ಈ ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿ ಆದೇಶಿಸಿದೆ.