ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವಾಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗಿ ಇನಾಯತ್ ಅಲಿ ಡಿ.ಕೆ. ಶಿವಕುಮಾರ್ ಗೆ 2 ಕೋಟಿ ರೂ. ನೀಡಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್ ಕೇಸ್ ನಲ್ಲಿ ಇನಾಯತ್ ತಮ್ಮನನ್ನು ಇಡಿ ಅಧಿಕಾರಿಕಗಳು ವಿಚಾರಣೆ ಮಾಡಿದ್ದಾರೆ. ಹೀಗಾಗಿ ಇನಾಯತ್ ಅಲಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
6 ತಿಂಗಳ ಹಿಂದೆ ಜಿಲ್ಲೆಗೆ ಬಂದಿದ್ದ ಡಿ.ಕೆ. ಶಿವಕುಮಾರ್ ಈ ಗುತ್ತಿಗೆದಾರನಿಗೆ ಟಿಕೆಟ್ ಮಾರಾಟ ಮಾಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಇನಾಯತ್ ಅಲಿಗೆ ಗುತ್ತಿಗೆ ನೀಡಲಾಗುತ್ತಿತ್ತು. ವಾಮಾ ಮಾರ್ಗ ಉಪಯೋಗಿಸಿ ನನಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.