ಕನ್ನಡದ ಹಿರಿಯ ನಟ ಹಾಗೂ ರಂಗಕರ್ಮಿ, ಮಾಜಿ ವಿಂಗ್ ಕಮಾಂಡರ್
ಹರಿಹರ್ ಗುಂಡುರಾವ್ ದತ್ತಾತ್ರೇಯ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು
ಇವರು ಭಾರತೀಯ ವಾಯುಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ.ನಂತರದಲ್ಲಿ ಕನ್ನಡ ರಂಗಭೂಮಿ ಮತ್ತು ಚಿತ್ರರಂಗದ ನಟರಾಗಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಖ್ಯಾತಿ ಗಳಿಸಿದ್ದಾರೆ.
ಕನ್ನಡದ ರಂಗಭೂಮಿ, ಕಿರುತೆರೆ, ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ತಮ್ಮ ನಟನೆಯಿಂದಲೇ “ದತ್ತಣ್ಣ” ಎಂದೇ ಪ್ರಖ್ಯಾತರಾದ ಹೆಚ್.ಜಿ. ದತ್ತಾತ್ರೆಯನವರು 1942ರಲ್ಲಿ ಏಪ್ರಿಲ್ 20 ರಂದು ಚಿತ್ರದುರ್ಗದಲ್ಲಿ ಜನಿಸಿದರು. ಅವರ ತಂದೆ ಹರಿಹರ ಗುಂಡೂರಾಯರು, ತಾಯಿ ವೆಂಕಮ್ಮ. ಓದಿದ್ದು ಎಂಜನಿಯರಿಂಗ್ ಪದವಿ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯಿಂದ ಎಂ.ಇ.ಪದವಿ ಪಡೆದಿದ್ದಾರೆ.