ಬೆಂಗಳೂರು : ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡು ಸುಮಾರು ದಿನಗಳೇ ಕಳೆದಿವೆ. ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದ್ದು, ನಾಳೆ (ಏಪ್ರಿಲ್ 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದೆ.
ಕಳೆದ ಮಾರ್ಚ್‌ನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 09 ರಿಂದ ಮಾರ್ಚ್ 29 ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ ಎಂದು ಮಂಡಳಿ ತಿಳಿಸಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಕುರಿತು ನಾಳೆ (ಏಪ್ರೀಲ್ 21) ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದ್ದು, ಫಲಿತಾಂಶವನ್ನು #https://karresults.nic.in ಜಾಲತಾಣದಲ್ಲಿ ಣಾಳೆ ಬೆಳಿಗ್ಗೆ 11 ಗಂಟೆಯ ಬಳಿಕ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.