ಐಪಿಎಲ್‌ನ ಇಂದು ಎರಡು ಪಂದ್ಯಗಳು ಇದ್ದು, ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ರನ್ ನಿಂದ ಗೆದ್ದು ಬೀಗಿದೆ. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ ಓವರ್‌ನಲ್ಲಿ 7 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ಗೆ 190 ರನ್ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿ ರಾಜಸ್ಥಾನ್ ರಾಯಲ್ಸ್ ನಿಗದಿತ ಓವರ್‌ನಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಉತ್ತಮ ಬೌಲಿಂಗ್ ಮಾಡಿದ ಹರ್ಷಲ್ ಪಟೇಲ್ 3 ವಿಕೆಟ್, ಸಿರಾಜ್ ಮತ್ತು ವಿಲ್ಲಿ ತಲಾ ಒಂದು ವಿಕೆಟ್ ಪಡೆದರು. ಆರ್‌ಸಿಬಿ ಪರ ಫಾಫ್ ಡು ಪ್ಲೆಸಿಸ್ 62, ಗ್ಲೆನ್ ಮ್ಯಾಕ್ಸ್‌ವೆಲ್ 77 ರನ್ ಗಳಿಸಿದರು. ರಾಯಲ್ಸ್ ಪರ ಬೊಲ್ಟ್ & ಸಂದೀಪ್ ತಲಾ 2 ವಿಕೆಟ್ ಪಡೆದರು.
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11 : ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ಕೀಪರ್/ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11 : ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ಕೀಪರ್), ಸುಯಶ್ ಪ್ರಭುದೇಸಾಯಿ, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯಕುಮಾರ್.