BREAKING : ರಾಹುಲ್ ಗಾಂಧಿ ಕಾರ್ಯಕ್ರಮ ದಿಡೀರ್ ರದ್ದು…!!

You are currently viewing BREAKING : ರಾಹುಲ್ ಗಾಂಧಿ ಕಾರ್ಯಕ್ರಮ ದಿಡೀರ್ ರದ್ದು…!!

ಕೊಪ್ಪಳ : ಜಿಲ್ಲೆಯ ಕುಷ್ಟಗಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆ ಮಹಿಳಾ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು, ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿದೆ ಎಂಬ ತಿಳಿದು ಬಂದಿದೆ. ಈ ಕಾರ್ಯಕ್ರಮ ರದ್ದಾಗುವುದಕ್ಕೆ ಪ್ರಮುಖ ಕಾರಣವೇಂದರೆ, ಹವಾಮಾನ ವೈಪರೀತ್ಯ ಹಿನ್ನೆಲೆ ರಾಹುಲ್ ಗಾಂಧಿ ಕುಷ್ಟಗಿಗೆ ಆಗಮಿಸಲು ಆಗಲಿಲ್ಲ, ಈ ಹಿನ್ನೆಲೆ ಕಾರ್ಯಕ್ರಮ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮಹಿಳಾ ಸಂವಾದದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಿದ್ದು, ರಾಹುಲ್ ಗಾಂಧಿ ಬಾರದೇ ಹಿನ್ನೆಲೆ ಮಹಿಳೆಯರಿಗೆ ಭಾರೀ ನಿರಾಸೆ ಮೂಡಿಸಿದೆ.

Leave a Reply

error: Content is protected !!