ಬೆಂಗಳೂರು : ಪ್ರಸ್ತತ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ರಾಜ್ಯದಲ್ಲಿ ಶೇ 83.89 ರಷ್ಟು ಫಲಿತಾಂಶ ಬಂದಿದೆ. ಕಳೆದ ಮಾರ್ಚ್ 31 ರಿಂದ ಆರಂಭವಾಗಿದ್ದ ಪರೀಕ್ಷೆಗಳು ಏಪ್ರಿಲ್ 15 ಕ್ಕೆ ಮುಕ್ತಾಯಗೊಂಡಿದ್ದವು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 8.6 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಎಸ್ಎಸ್ ಎಲ್ ಸಿ ಮೌಲ್ಯಮಾಪನಕ್ಕೆ 62 ಸಾವಿರ ಶಿಕ್ಷಕರನ್ನು ನಿಯೋಜನೆ ಮಾಡಲಾಗಿತ್ತು.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಅಧಿಕೃತ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದು.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ…
1. ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್ಸೈಟ್ ಓಪನ್ ಮಾಡಿ
2. ನಂತರ ಮುಖಪುಟದಲ್ಲಿ ಕರ್ನಾಟಕ ಎಸ್ಎಸ್ಎಲ್ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು
3. ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಬೇಕು
4. ನಂತರ ಫಲಿತಾಂಶವನ್ನು ಪರಿಶೀಲಿಸಿ ಮತ್ತು ರಿಸಲ್ಟ್ ಶೀಟ್ ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ಬಾರಿ ಶೇ. 83.89 ರಷ್ಟು ಫಲಿತಾಂಶ ಬಂದಿದೆ. ರಾಜ್ಯಕ್ಕೆ ಇವರೇ ಟಾಪ್ ರ್‍ಯಾಂಕರ್ಸ್.
1. ಭೀಮನಗೌಡ ಪಾಟೀಲ್ : ವಿಜಯಪುರ ಜಿಲ್ಲೆ
2. ಭೂಮಿಕಾ ಪೈ : ಬೆಂಗಳೂರು ಜಿಲ್ಲೆ
3. ಯಶಸ್ ಗೌಡ : ಚಿಕ್ಕಬಳ್ಳಾಪುರ ಜಿಲ್ಲೆ
4. ಅನುಪಮ ಶ್ರೀಶೈಲ್ : ಬೆಳಗಾವಿ ಜಿಲ್ಲೆ