ಕೊಪ್ಪಳ : ಕೊಪ್ಪಳ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಕಾರಟಗಿ ತಾಲೂಕಿನ ಜಮಾಪೂರದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿಗೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಜಮಾಪೂರ ಇಲ್ಲಿಗೆ ಜೀವಶಾಸ್ತ್ರ ಉಪನ್ಯಾಸಕರು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಲು ಬೇಕಾಗಿದ್ದಾರೆ. ಅರ್ಹತೆ ಎಂ.ಎಸ್.ಸಿ ಮತ್ತು ಬಿಎಡ್ ಉಪನ್ಯಾಸಕರಿಗೆ ಉಚಿತ ವಸತಿ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು.
ಅರ್ಜಿ ಸಲ್ಲಿಸಲು ಮೇ 29 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜು ಜಮಾಪೂರ ಮೊ.ಸಂ: 9481660459 ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.