ಕುಕನೂರು: ಕರ್ನಾಟಕ ಲೋಕಾಯುಕ್ತ ಕೊಪ್ಪಳ ಕಚೇರಿಯಿಂದ ಮೇ 23ರಂದು ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ.
ಅಂದು ಬೆಳಿಗ್ಗೆ 10.30ಕ್ಕೆ ಕುಕನೂರಿನ ಸರ್ಕ್ಯೂಟ್ ಹೌಸ್‌ನ ಮೀಟಿಂಗ್ ಹಾಲ್‌ನಲ್ಲಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ರಾಯಚೂರು ಅವರು ಹಾಜರಿದ್ದು, ಎಲ್ಲಾ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 & 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಈ ಸಭೆಯ ಉಪಯೋಗ ಪಡೆದುಕೊಳ್ಳಲು ಈ ಮೂಲಕ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08539-295200 & 220533 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಕೊಪ್ಪಳ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.