ಮೇ 28ಕ್ಕೆ 6ನೇ ತರಗತಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ .


ಕೊಪ್ಪಳ: 2023-24ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಮುಖಾಂತರ ಆಯ್ಕೆ ಮಾಡಬೇಕಾಗಿದ್ದು, ಪ್ರವೇಶ ಪರೀಕ್ಷೆಯಯನ್ನು ಮೇ 28ರ ರವಿವಾರದಂದು ಬೆಳಿಗ್ಗೆ 10 ಗಂಟೆಯಿಂದ ಆಯಾ ವಸತಿ ಶಾಲೆಯ ವ್ಯಾಪ್ತಿಯಲ್ಲಿ ನಡೆಸಲಾಗುವುದು.
ವಿದ್ಯಾರ್ಥಿಗಳು ತಾವು ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಗಳಿಗೆ ಅಥವಾ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಾದ ಕುಕನೂರು ಶಾಲೆ ಮೊ.ಸಂ: 9844040035, ತಳಕಲ್ ಶಾಲೆ ಮೊ.ಸಂ: ಕುಕನೂರು-6361118478, ಕುದರಿಮೋತಿ ಶಾಲೆ ಮೊ.ಸಂ: 9740702035, ಟಣಕನಕಲ್ ಶಾಲೆ ಮೊ.ಸಂ: 9902690349, ಹಿರೇಬೆಣಕಲ್-1 &2 ಶಾಲೆಯ ಮೊ.ಸಂ: 9036866642, ಅಲ್ಪಸಂಖ್ಯಾತರ ನವೋದಯ ಮಾದರಿಯ ವಸತಿ ಶಾಲೆ ಹಿರೇಸಿಂದೋಗಿ ಮೊ.ಸಂ: 9449739268 ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಹಿರೇಬನ್ನಿಗೋಳ) ಕುಷ್ಟಗಿ ಮೊ.ಸಂ: 9964915789, ಇಲ್ಲಿಗೆ ಭೇಟಿನೀಡಿ ಪ್ರವೇಶ ಪತ್ರವನ್ನು (ಹಾಲ್ ಟಿಕೇಟ್) ಪಡೆದುಕೊಂಡು ಪರೀಕ್ಷೆಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ 08539-225070, 8088892549, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಗಂಗಾವತಿ ಮೊ.ಸಂ: 9972524670, ಕುಷ್ಟಗಿ ಮೊ.ಸಂ: 8861610578 ಹಾಗೂ ಯಲಬುರ್ಗಾ ಮೊ.ಸಂ: 9620522537ಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!