ಕುಕನೂರು :ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಸವರಾಜ ರಾಯರಡ್ಡಿಗೆ ಸಚಿವ ಸ್ಥಾನ ಸಿಗುತ್ತದ್ದೆ ಎಂಬ ವಿಶ್ವಾಸ ಇಡೀ ಕ್ಷೇತ್ರದ ಜನರಲ್ಲಿ ಮನೆ ಮಾಡಿತ್ತು ಆದರೆ ರಾಯರಡ್ಡಿಯವರಿಗೆ ಸಚಿವ ಸ್ಥಾನ ದೊರೆಯದೆ ಇರುವುದಕ್ಕೆ ಕುಕನೂರು ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿನ್ನಾಳ ಬೇಸರ ವ್ಯಕಪಡಿಸಿದ್ದಾರೆ.
ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ರಾಯರಡ್ಡಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರಾಗಿದ್ದು ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂದು ನಂಬಿದ್ದೇವೆ. ಆದರೆ ಅವರಿಗೆ ಸಚಿವ ಸ್ಥಾನ ನೀಡದೆ ಇರುವುದು ಇಡೀ ಯಲಬುರ್ಗಾ ಕ್ಷೇತ್ರದ ಜನತೆಗೆ ಬೇಸರವನ್ನು ತರಿಸಿದೆ.
ಸಿದ್ದರಾಮಯ್ಯನವರೇ ಹೇಳಿದಂತೆ ಬಸವರಾಜ ರಾಯರಡ್ಡಿಯವರು ಒಬ್ಬ ಉತ್ತಮ ಹಣಕಾಸು ನಿರ್ವಹಣೆಗಾರರಾಗಿದ್ದಾರೆ. ಅಲ್ಲದೇ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗ ಸಾಕಷ್ಟು ಅಭಿವೃದ್ದಿ ಕಾರ್ಯಗಲಳನ್ನು ಮಾಡಿದ್ದಾರೆ. ಬೆಂಗಳೂರಿನಲ್ಲಿ ಸ್ಕೂಲ್ ಆಫ್ ಎಕನಾಮಿಕ್ಸ್, ಧಾರವಾಡದಲ್ಲಿ ಐಐಟಿ ಕಾಲೇಜು ಹಾಗೂ ಡಿಗ್ರಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಹಾಗೂ ಕ್ಷೇತ್ರದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗುವಂತೆ ಇಂಜಿನಿಯರಿAಗ್ ಕಾಲೇಜು, ಕೌಶಲ್ಯ ಅಭಿವೃದ್ದಿ ಕೇಂದ್ರ ಹಾಗೂ ಸಾಕಷ್ಟು ವಸತಿ ಶಾಲೆಗಳನ್ನು ನಿರ್ಮಿಸಿ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿ ಮಾಡಿದ್ದಾರೆ.
ಇಂತಹ ಅಭಿವೃದ್ದಿ ಹಾಗೂ ಜನಪರ ಕಾಳಜಿಯುಳ್ಳ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಬೇಕು. ಈ ಕುರಿತು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಪಕ್ಕದ ಪ್ರಮುಖರೊಂದಿಗೆ ಚರ್ಚೆ ಮಾಡಿ ನಿರ್ಣಯವನ್ನು ತೆಗೆದುಕೊಂಡು, ರಾಯರಡ್ಡಿಯವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯದ ಮೂಲಕ ಮನವಿ ಮಾಡಿಕೊಂಡಿದ್ದಾರೆ.