ಜೂನ್ 07ರಂದು ಕಾರಟಗಿ, ಕನಕಗಿರಿಯಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ


ಕೊಪ್ಪಳ : ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಜೂನ್ 07ರಂದು ಜಿಲ್ಲೆಯ ಕಾರಟಗಿ ಮತ್ತು ಕನಕಗಿರಿ ತಾಲೂಕುಗಳಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ನಡೆಯಲಿದೆ.
ಕಾರಟಗಿ ಮತ್ತು ಕನಕಗಿರಿ ತಾಲೂಕುಗಳ ವ್ಯಾಪ್ತಿಯ ಸಾರ್ವಜನಿಕರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿ ಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಲಂಚ ಕೇಳುವುದು ಇತ್ಯಾದಿ ದುರಾಡಳಿತದಲ್ಲಿ ತೊಡಗಿದ್ದರೆ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಕಾರ್ಯಕ್ರಮವನ್ನು ಹಾಗೂ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನೆಡೆಸಲು ತೀರ್ಮಾನ ಮಾಡಲಾಗಿದೆ.
ಸಭೆ ಸ್ಥಳ ವಿವರ: ಲೋಕಾಯುಕ್ತ ಅಧಿಕಾರಿಗಳು ಜೂನ್ 07ರಂದು ಬೆಳಗ್ಗೆ 10.30 ರಿಂದ 01.30ರವರೆಗೆ ಕಾರಟಗಿ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ಹಾಗೂ ಮಧ್ಯಾಹ್ನ 02.30 ರಿಂದ ಸಂಜೆ 05.30 ರವರೆಗೆ ಕನಕಗಿರಿಯ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳ ಶೆಟ್ಟರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಎಲ್ಲಾ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ : 1 & 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಕಾರಟಗಿ ಮತ್ತು ಕನಕಗಿರಿ ತಾಲೂಕುಗಳ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಲು ಈ ಮೂಲಕ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08539-295200 & 220533 ಮತ್ತು 295833ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಕೊಪ್ಪಳ ಪೊಲೀಸ್ ಉಪಾಧೀಕ್ಷಕರು ತಿಳಿಸಿರುತ್ತಾರೆ.

Leave a Reply

error: Content is protected !!