ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಪ್ರವಾಸ ವಿವರ


ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜೂನ್ 11 ಮತ್ತು ಜೂನ್ 12ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜೂನ್ 11ರಂದು ಬೆಳಗ್ಗೆ 11.30ಕ್ಕೆ ಹೊಸಪೇಟೆಯಿಂದ ನಿರ್ಗಮಿಸಿ 12.30ಕ್ಕೆ ಕೊಪ್ಪಳ ನಗರಕ್ಕೆ ಆಗಮಿಸಿ ಕೇಂದ್ರಿಯ ಬಸ್ ನಿಲ್ದಾಣದ ಆವರಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡುವರು. ಮಧ್ಯಾಹ್ನ 1.30ಕ್ಕೆ ಕೊಪ್ಪಳದಿಂದ ನಿರ್ಗಮಿಸಿ 2.30ಕ್ಕೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮಕ್ಕೆ ತೆರಳಿ, ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿರುವ ಕುಟುಂಬದವರಿಗೆ ಭೇಟಿ ಮಾಡಿ ಸಂತ್ವನ ಹೇಳುವರು. ಮಧ್ಯಾಹ್ನ 3 ಗಂಟೆಗೆ ಬಿಜಕಲ್‌ದಿಂದ ನಿರ್ಗಮಿಸಿ ಸಂಜೆ 4 ಗಂಟೆಗೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮಕ್ಕೆ ತೆರಳಿ, ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿರುವ ಕುಟುಂಬದವರಿಗೆ ಭೇಟಿ ಮಾಡಿ ಸಂತ್ವನ ಹೇಳುವರು. ಸಂಜೆ 5 ಗಂಟೆಗೆ ಬಸರಿಹಾಳದಿಂದ ನಿರ್ಗಮಿಸಿ ಸಂಜೆ 5.30ಕ್ಕೆ ಕನಕಗಿರಿಗೆ ತೆರಳಿ ಸಾರ್ವಜನಿಕ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸುವರು.
ಜೂನ್ 12ರಂದು ಬೆಳಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ಬೆಳಗ್ಗೆ 11 ಗಂಟೆಗೆ ಹುಲಿಗಿ ಗ್ರಾಮಕ್ಕೆ ತೆರಳಿ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 12 ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಕೊಪ್ಪಳ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳ ನಗರದಿಂದ ನಿರ್ಗಮಿಸಿ ಸಂಜೆ 4 ಗಂಟೆಗೆ ಕಾರಟಗಿಗೆ ತೆರಳಿ ಸಾರ್ವಜನಿಕ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ಜಿ.ಎಸ್.ಮಧುಸೂದನ್ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!