ಬೆಂಗಳೂರು : ರಾಜ್ಯದಲ್ಲಿ ಇನ್ನು 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಕಾರಣ ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಪರಿಣಾಮ ಭಾರೀ ಮಳೆ ಆಗಲಿದೆ ಎಂದು ತಿಳಿಸಿದೆ. ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಹಲವೆಡೆ ಗುಡುಗು ಮಿಂಚಿನ ಸಹಿತ ಮಳೆಯಾಗಲಿದೆ. ರಾಜ್ಯದ ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ರಾಜ್ಯ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಕರಾವಳಿ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಸುಮಾರು 60 ರಿಂದ 65 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮೀನುಗಾರರು ಎಚ್ಚರಿಕೆಯಿಂದಿರುವಂತೆ ಇಲಾಖೆ ಸೂಚನೆ ನೀಡಿದೆ.