ಕೊಪ್ಪಳ ಜಿಲ್ಲೆಯ ವಿವಿಧ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ

You are currently viewing ಕೊಪ್ಪಳ ಜಿಲ್ಲೆಯ ವಿವಿಧ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕೃಷ್ಣಭಾಗ್ಯ ಜಲ ನಿಗಮ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕೊಪ್ಪಳ ಏತ ನೀರಾವರಿ ಯೋಜನೆಯೂ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ಪ್ರಗತಿ ಕುರಿತು ಜೂನ್ 14ರಂದು ಪರಿಶೀಲನಾ ಸಭೆ ನಡೆಸಿದರು.

ಕೊಪ್ಪಳ ಜಿಲ್ಲೆಯ ಕೆರೆಗಳಲ್ಲಿ ನೀರು ತುಂಬುವುದಕ್ಕೆ ಕ್ರಮ ಕೈಗೊಳ್ಳುವಂತೆ ಸಚಿವರು ಇದೆ ವೇಳೆ ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಗಳ ಅನುಷ್ಠಾನಕ್ಕೆ ಇರುವ ತೊಡಕುಗಳು ಮತ್ತು ಅದರ ಪರಿಹಾರೋಪಾಯಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ನಿಗಮದ ಕೇಂದ್ರ ಕಚೇರಿಯ ಅಧಿಕಾರಿಗಳು ಮತ್ತು ವಿ ನಾರಾಯಣಪುರದ ಉಪವಿಭಾಗದ ಅಧಿಕಾರಿಗಳು ಹಾಜರಿದ್ದರು.

Leave a Reply

error: Content is protected !!