ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 5 ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
1. ರಾಜ್ಯ ಸರ್ಕಾರದಿಂದ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಸೇರಿಸಿದ್ದಂತ ಆರ್‌ಎಸ್ಎಸ್ ಸಂಸ್ಥಾಪಕ ಹೆಗ್ಡೆವಾರ್ ಹಾಗೂ ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರ ಪಠ್ಯವನ್ನು ಕೈಬಿಡಲು ಸಚಿವ ಸಂಪುಟ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.
2. ಈ ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ “ಮತಾಂತರ ವಿರೋಧಿ ಕಾನೂನ”ನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.
3. ಎಪಿಎಂಸಿ ಕಾಯ್ದೆ ರದ್ದತಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
4. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಅಧಿನಿಯಮ ರದ್ದುಮಾಡಲಾಗಿದೆ.
5. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ “ಸಂವಿಧಾನದ ಪೀಠಿಕೆ” ಓದುವುದು ಕಡ್ಡಾಯವೇಂದು ಆದೇಶ ಹೊರಡಿಸಿದೆ.