ಕೊಪ್ಪಳ : ಮಾನವ ಜೀವ ಹಾನಿ ಹಾಗೂ ಜಾನುವಾರ ಪ್ರಾಣ ಹಾನಿ ಪ್ರಕರಣಗಳು, ಬೆಳೆ ಹಾನಿ ಮತ್ತು ಮನೆ ಹಾನಿ ಪ್ರಕರಣಗಳಿಗೆ ಪರಿಹಾರ ಕಾರ್ಯವನ್ನು ವಿಳಂಬವಿಲ್ಲದAತೆ ವಿತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಹೇಳಿದರು.
ಜಿಲ್ಲಾಡಳಿತ ಭವನದಲ್ಲಿನ ಕೇಶ್ವಾನ್ ಹಾಲನಲ್ಲಿ ಜೂನ್ 16ರಂದು ಸಂಜೆ ನಡೆದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಯಿಂದಾಗಿ ಜೀವಹಾನಿ ಇಲ್ಲವೇ ಮನೆಹಾನಿಯಾದಲ್ಲಿ ಅಂತಹ ಕಡೆಗೆ ಅಧಿಕಾರಿಗಳು ತಕ್ಷಣ ದಾವಿಸಿ ನಿಯಮಾನುಸಾರ ಪರಿಹಾರಕ್ಕೆ ಕ್ರಮ ವಹಿಸಬೇಕು. ಕೃಷಿ, ತೋಟಗಾರಿಕಾ ಬೆಳೆಗಳು ಹಾನಿಯಾದಲ್ಲಿ ಜಂಟಿ ಸಮೀಕ್ಷೆ ನಡೆಸಿ ಪರಿಹಾರಕ್ಕಾಗಿ ತಹಸೀಲ್ದಾರ ಅವರಿಗೆ ವರದಿ ಮಾಡಬೇಕು ಎಂದು ಸೂಚಿಸಿದರು.
ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವಿನ ಲಭ್ಯತೆಗೆ ಗಮನ ಹರಿಸಬೇಕು. ಜಾನುವಾರು ಪ್ರಾಣ ಹಾನಿ ಪ್ರಕರಣಗಳಿಗೆ ಪರಿಹಾರಕ್ಕೆ ತಕ್ಷಣ ಕ್ರಮ ವಹಿಸಬೇಕು. ಮಳೆಗಾಳಿಯಿಂದಾಗಿ ವಿದ್ಯುತ್ ಕಂಬಗಳು ಉರುಳಿದಲ್ಲಿ, ವಿದ್ಯುತ್ ತಂತಿಗಳು ಹರಿದು ಬಿದ್ದಲಿ ತಕ್ಷಣ ಬದಲಿ ವ್ಯವಸ್ಥೆಗೆ ಕ್ರಮ ವಹಿಸಬೇಕು. ವಿದ್ಯುತ್ ಟ್ರಾನ್ಸಪಾರ್ಮರಗಳು ಸುಟ್ಟಲ್ಲಿ ಬದಲಾಯಿಸಲು ಅಗತ್ಯ ಪ್ರಮಾಣದಲ್ಲಿ ಟಿಸಿ ಮತ್ತು ವಿದ್ಯುತ್ ಕಂಬಗಳು ಲಭ್ಯತೆಗೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ಪಶುಪಾಲನಾ ಇಲಾಖೆ ಮತ್ತು ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಪಾಂಡೆಯ ಅವರು ಮಾತನಾಡಿ, ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳು ಕಡ್ಡಾಯವಾಗಿ ಗ್ರಾಮಮಟ್ಟದಲ್ಲಿ ಸಹ ನಡೆಯಬೇಕು. ಗ್ರಾಮ, ಹೋಬಳಿವಾರು ಕುಡಿಯುವ ನೀರು, ಮೂಲಭೂತ ಸೌಕರ್ಯ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಚರ್ಚೆಯಾಗಬೇಕು. ಆಯಾ ಗ್ರಾಮ ಪಂಚಾಯತ್ ಸದಸ್ಯರ ಮತ್ತು ಗ್ರಾಮಸ್ಥರ ಸಹಕಾರ ಪಡೆದು ಜನರಿಗೆ ತೊಂದರೆಯಾಗದ ಹಾಗೆ ಯೋಜನೆಗಳ ಅನುಷ್ಠಾನಕ್ಕೆ ಒತ್ತು ಕೊಡಬೇಕು ಎಂದು ಸಲಹೆ ಮಾಡಿದರು.
ಮಳೆಯಿಂದಾಗಿ ಕೊಪ್ಪಳ, ಕುಷ್ಟಗಿ, ಕುಕನೂರ, ಯಲಬುರ್ಗಾ ಮತ್ತು ಗಂಗಾವತಿ ತಾಲೂಕುಗಳಲ್ಲಿ ಸಿಡಿಲಿನಿಂದ ಮೃತಪಟ್ಟ ಐವರು ಮತ್ತು ಕನಕಗಿರಿ ತಾಲೂಕಿನಲ್ಲಿ ಮನೆಕುಸಿದು ಮೃತಪಟ್ಟ ಇಬ್ಬರು ಸೇರಿ ಒಟ್ಟು 7 ಮಾನವ ಜೀವ ಹಾನಿ ಪ್ರಕರಣಗಳಿಗೆ ತಲಾ 5 ಲಕ್ಷ ರೂ.ಗಳಂತೆ 35,00,000 ರೂ.ಪರಿಹಾರವನ್ನು ಸಂತ್ರಸ್ತರಿಗೆ ವಿತರಿಸಲಾಗಿದೆ. ಏಪ್ರಿಲ್‌ನಿಂದ ಮೇ ಮಾಹೆವರೆಗೆ ಕೊಪ್ಪಳ ಮತ್ತು ಗಂಗಾವತಿ ತಾಲೂಕುಗಳಲ್ಲಿ ತಲಾ 4, ಕುಷ್ಟಗಿ ತಾಲೂಕಿನಲ್ಲಿ 10, ಕುಕನೂರ ತಾಲೂಕಿನಲ್ಲಿ 9 ಹಾಗು ಯಲಬುರ್ಗಾ ತಾಲೂಕಿನಲ್ಲಿ 22 ಸೇರಿ ಒಟ್ಟು 49 ಮನೆಹಾನಿ ಪ್ರಕರಣಗಳಿಗೆ ಪೂರ್ಣಪ್ರಮಾಣದಲ್ಲಿ ಪರಿಹಾರ ವಿತರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಸಭೆಗೆ ಮಾಹಿತಿ ನೀಡಿದರು.
ಮಳೆಯಿಂದಾಗಿ ಜಿಲ್ಲೆಯಲ್ಲಿ ಏಪ್ರಿಲ್‌ದಿಂದ ಜೂನ್ 15ರವರೆಗೆ ಕೊಪ್ಪಳ ತಾಲೂಕಿನಲ್ಲಿ 9, ಕುಷ್ಟಗಿ ತಾಲೂಕಿನಲ್ಲಿ 12, ಕನಕಗಿರಿ ತಾಲೂಕಿನಲ್ಲಿ 1, ಕೂಕನೂರ ತಾಲೂಕಿನಲ್ಲಿ 4 ಮತ್ತು ಯಲಬುರ್ಗಾ ತಾಲೂಕಿನಲ್ಲಿ 5 ಸೇರಿ ಒಟ್ಟು 31 ಜಾನುವಾರುಗಳು ಸಾವಿಗೀಡಾಗಿವೆ. ಇದುವರೆಗೆ ಒಟ್ಟು 6,60,000 ರೂ.ಗಳನ್ನು ಸಂತ್ರಸ್ತರಿಗೆ ನೀಡಲು ಕ್ರಮ ವಹಿಸಲಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಜೂನ್ 15 ಕೊನೆಗೊಂಡAತೆ ಕೊಪ್ಪಳ ಜಿಲ್ಲೆಯಲ್ಲಿ 24,233 ಮೆ.ಟನ್ ಯೂರಿಯಾ, 12,142 ಮೆ.ಟನ್ ಡಿಎಪಿ, 906 ಮೆ ಟನ್ ಎಂಓಪಿ, 27,616 ಮೆ ಟನ್ ಎನ್‌ಕೆಪಿಎಸ್ ಮತ್ತು 411 ಮೆ ಟನ್ ಎಸ್‌ಎಸ್‌ಪಿ ರಸಗೊಬ್ಬರ ದಾಸ್ತಾನು ಇದೆ. ಅದೇ ರೀತಿ ಜೂನ್ 15 ಕೊನೆಗೊಂಡAತೆ ಕೊಪ್ಪಳ, ಕುಷ್ಟಗಿ, ಯಲಬುರ್ಗಾ ಮತ್ತು ಗಂಗಾವತಿ ತಾಲೂಕುಗಳು ಸೇರಿ ಒಟ್ಟು 153 ಕ್ವಿಂಟಲ್ ಭತ್ತದ ಬೀಜ ಮಾರಾಟವಾಗಿದ್ದು 300.75 ಕ್ವಿಂಟಲ್ ದಾಸ್ತಾನು ಇದೆ.
ಮೆಕ್ಕೆಜೋಳದ ಬೀಜವು 1743.81 ಕ್ವಿಂಟಲ್ ಮಾರಾಟವಾಗಿದ್ದು 1720.94 ಕ್ವಿಂಟಲ್ ದಾಸ್ತಾನು ಇದೆ. ಸಜ್ಜೆ ಬೀಜವು 135.18 ಕ್ವಿಂಟಲ್ ಮಾರಾಟವಾಗಿದ್ದು 191.90 ಕ್ವಿಂಟಲ್ ದಾಸ್ತಾನು ಇದೆ. ನವಣಿ ಬೀಜವು 1.72 ಕ್ವಿಂಟಲ್ ಮಾರಾಟವಾಗಿದ್ದು 5.88 ಕ್ವಿಂಟಲ್ ದಾಸ್ತಾನು ಇದೆ. ಹೆಸರು ಬೀಜವು 121.09 ಕ್ವಿಂಟಲ್ ಮಾರಾಟವಾಗಿದ್ದು 49.71 ಕ್ವಿಂಟಲ್ ದಾಸ್ತಾನು ಇದೆ. ತೊಗರಿ ಬೀಜವು 378.87 ಕ್ವಿಂಟಲ್ ಮಾರಾಟವಾಗಿದ್ದು 295.73 ಕ್ವಿಂಟಲ್ ದಾಸ್ತಾನು ಇದೆ. ಸೂರ್ಯಕಾಂತಿ ಬೀಜವು 12.75 ಮಾರಾಟವಾಗಿದ್ದು 99.03 ಕ್ವಿಂಟಲ್ ದಾಸ್ತಾನು ಇದೆ. ಭತ್ತ, ಮೆಕ್ಕೆಜೋಳ, ಸಜ್ಜೆ, ನವಣೆ, ಹೆಸರು, ತೊಗರಿ ಮತ್ತು ಸೂರ್ಯಕಾಂತಿ ಸೇರಿ ಕೊಪ್ಪಳ ಜಿಲ್ಲೆಗೆ ಒಟ್ಟು 5210.39 ಕ್ವಿಂಟಲ್ ಬೀಜ ದಾಸ್ತಾನು ಪೈಕಿ ಜೂನ್ 15ರವರೆಗೆ 2546.42 ಕ್ವಿಂಟಲ್ ಬೀಜ ಮಾರಾಟವಾಗಿ ಈಗ 2663.94 ಕ್ವಿಂಟಲ್ ದಾಸ್ತಾನು ಇದೆ ಎಂದು ಜಂಟಿ ಕೃಷಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಮಾರ್ಚ 31ರಿಂದ ಮೇ 31ರವರೆಗೆ ಗಂಗಾವತಿ ತಾಲೂಕಿನಲ್ಲಿ ವಾಡಿಕೆ ಮಳೆ 60 ಮಿಮಿ ಇದ್ದು ವಾಸ್ತವವಾಗಿ 68 ಮಿಮಿ ಸುರಿದಿದೆ. ಕೊಪ್ಪಳ ತಾಲೂಕಿನಲ್ಲಿ ವಾಡಿಕೆ ಮಳೆ 71 ಮಿಮಿ ಇದ್ದು ವಾಸ್ತವವಾಗಿ 55 ಮಿಮಿ ಸುರಿದಿದೆ. ಕುಷ್ಟಗಿ ತಾಲೂಕಿನಲ್ಲಿ ವಾಡಿಕೆ ಮಳೆ 75 ಮಿಮಿ ಇದ್ದು 674 ಮಿಮಿ ಸುರಿದಿದೆ. ಯಲಬುರ್ಗಾ ತಾಲೂಕಿನಲ್ಲಿ ವಾಡಿಕೆ ಮಳೆ 83 ಇದ್ದು ವಾಸ್ತವವಾಗಿ 72 ಮಿಮಿ ಸುರಿದಿದೆ. ಕಾರಟಗಿ ತಾಲೂಕಿನಲ್ಲಿ ವಾಡಿಕೆ ಮಳೆ 71 ಮಿಮಿ ಇದ್ದು ವಾಸ್ತವವಾಗಿ 60 ಮಿಮಿ ಸುರಿದಿದೆ. ಕುಕನೂರ ತಾಲೂಕಿನಲ್ಲಿ ವಾಡಿಕೆ ಮಳೆ 116 ಮಿಮಿ ಇದ್ದು ವಾಸ್ತವವಾಗಿ 84 ಮಿಮಿ ಸುರಿದಿದೆ. ಕನಕಗಿರಿ ತಾಲೂಕಿನಲ್ಲಿ ವಾಡಿಕೆ ಮಳೆ 50 ಮಿಮಿ ಇದ್ದು ವಾಸ್ತವವಾಗಿ 52 ಮಿಮಿ ಸುರಿದಿದೆ. ಒಟ್ಟಾರೆ ಜಿಲ್ಲೆಯಲ್ಲಿ ವಾಡಿಕೆ ಮಳೆ 79 ಮಿಮಿ ಇದ್ದು ವಾಸ್ತವವಾಗಿ 67 ಮಿಮಿ ಮಳೆ ಸುರಿದು ಶೇ.15ರಷ್ಟು ಮಳೆಕೊರತೆಯಾಗಿದೆ ಎಂದು ಕೃಷಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ., ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಪಶುಪಾಲನೆ, ಜೆಸ್ಕಾಂ ಸೇರಿದಂತೆ ಇನ್ನೀತರ ಇಲಾಖೆಗಳ ಅಧಿಕಾರಿಗಳು ಇದ್ದರು.