BREAKING : ಗೃಹ ಜ್ಯೋತಿ ಯೋಜನೆಗೆ ಈ ಷರತ್ತುಗಳು ಅನ್ವಯ

You are currently viewing BREAKING : ಗೃಹ ಜ್ಯೋತಿ ಯೋಜನೆಗೆ ಈ ಷರತ್ತುಗಳು ಅನ್ವಯ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ‘ಶಕ್ತಿ ಯೋಜನೆ’ಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೆ, ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಕೆ ನಾಳೆಯಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ.

*ಗೃಹ ಜ್ಯೋತಿ ಯೋಜನೆಗೆ ಈ ಷರತ್ತುಗಳು ಅನ್ವಯವಾಗಿದೆ*

1. ವಾಣಿಜ್ಯ ಉದ್ದೇಶಗಳಿಗೆ ಅನ್ವಯವಾಗುವುದಿಲ್ಲ.
2. ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುವುದು.
3. ಗ್ರಾಹಕರು net bill ನ್ನು ಪಾವತಿಸಬೇಕು.
4. ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
5. ಪ್ರತಿ ಫಲಾನುಭವಿಯು ತನ್ನ Connection ID / Account ID ಅನ್ನು ಆಧಾರ್ ಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು.
6. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಹಾಗೂ ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡೆ ಮಾಡಲಾಗುವುದು.
7. ಜೂನ್ 30ರ ಅಂತ್ಯಕ್ಕೆ (ಜೂನ್ 2023 ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023 ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರು ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
8. ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳುಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
9. ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.

ಈ ವೆಬ್ ಸೈಟ್ ( Website ) ವಿಳಾಸ ಹೀಗಿದೆ. https://sevasindhugs1.karnataka.gov.in/index.html ಸೇವಾಸಿಂಧು ಪೋರ್ಟಲ್ ನ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದು ಎಂದು ಇಲಾಖೆ ತಿಳಿಸಿದೆ.

Leave a Reply

error: Content is protected !!