ಕೊಪ್ಪಳ ಗ್ರಾಮ ಪಂಚಾಯತ್ ಸದಸ್ಯರ ಸಭೆ ಜೂನ್ 21ಕ್ಕೆ ಮುಂದೂಡಿಕೆ

You are currently viewing ಕೊಪ್ಪಳ ಗ್ರಾಮ ಪಂಚಾಯತ್ ಸದಸ್ಯರ ಸಭೆ ಜೂನ್ 21ಕ್ಕೆ ಮುಂದೂಡಿಕೆ

ಕೊಪ್ಪಳ: ಕೊಪ್ಪಳ ತಾಲೂಕಿನ 38 ಗ್ರಾಮ ಪಂಚಾಯತ್‌ಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ ಸಭೆಯು ಜೂನ್ 21ರಂದು ಬೆಳಗ್ಗೆ 10.30ರಿಂದ ಕೊಪ್ಪಳದ ಬಹದ್ದೂರಬಂಡಿ ರಸ್ತೆಯಲ್ಲಿನ ಮಹಾವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಈ ಪ್ರಯುಕ್ತ ಸಂಬAಧಪಟ್ಟ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಸಭೆಗೆ ನಿಗದಿಪಡಿಸಿದ ಸ್ಥಳದಲ್ಲಿ ಉಪಸ್ಥಿತರಿರಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರು ತಿಳಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ, 1993ರ ಪ್ರಕರಣ 44(2)ರನ್ವಯ ಗ್ರಾಮ ಪಂಚಾಯಿತಿಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ವರ್ಗವಾರು ಸಂಖ್ಯೆಯನ್ನು ನಿಗದಿಪಡಿಸಿರುತ್ತದೆ. 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!