ಬೆಂಗಳೂರು : ಸರ್ಕಾರಿ & ಅನುಧಾನಿತ ಶಾಲಾ ಮಕ್ಕಳಿಗೆ ವಿತರಿಸಲಾಗುವ ಮೊಟ್ಟೆಗಳಿಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಕಡಿತ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ಇನ್ಮುಂದೆ 9 ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೂ ಮೊಟ್ಟೆ ನೀಡುವ ಚಿಂತನೆ ಮಾಡಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರ ಮಾತನಾಡಿದ ಅವರು, ನಾವು ಶಾಲಾ ಮಕ್ಕಳಿಗೆ ನೀಡುತ್ತಿರುವಂತ ಕೋಳಿ ಮೊಟ್ಟೆಯನ್ನು ಕಡಿತ ಮಾಡಿಲ್ಲ, ಇದಲ್ಲೆ ಅಪಪ್ರಚಾರ, ಸುಳ್ಳು ಸುದ್ದಿಯಾಗಿದೆ ಎಂದರು.
ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಿಸುವ ನಿಟ್ಟಿನಲ್ಲಿ ನೀಡಬೇಕಿರುವ ಪೋಷಕಾಂಶ ಯುಕ್ತ ಆಹಾರವನ್ನು ನೀಡಲಾಗುತ್ತಿದೆ. ಆ ಪ್ರಮಾಣದಲ್ಲಿ ಯಾವುದೇ ಕಡಿತವನ್ನು ಸರ್ಕಾರ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.
ರಾಜ್ಯ ಸರ್ಕಾರದಿಂದ ಸರ್ಕಾರಿ & ಅನುಧಾನಿತ ಶಾಲಾ (9 ರಿಂದ 10ನೇ ತರಗತಿ) ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡುವ ಚಿಂತನೆ ನಡೆಸಲಾಗುತ್ತಿದೆ. ಆ ಬಗ್ಗೆ ಕೆಲವೇ ದಿನಗಳಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಪ್ರಕಟಿಸಲಿದೆ ಎಂದು ತಿಳಿಸಿದರು.