ಕೊಪ್ಪಳ: ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ವಸತಿ ಶಾಲೆಯಲ್ಲಿ ಖಾಲಿ ಇರುವ ಸಮಾಜ ವಿಜ್ಞಾನ ವಿಷಯದ ಒಂದು ಹುದ್ದೆಗೆ ಎಂಎ ಬಿಎಡ್ ವಿದ್ಯಾರ್ಹತೆ, ಒಂದು ಗಣಕಯಂತ್ರ ವಿಜ್ಞಾನ ಶಿಕ್ಷರ ಹುದ್ದೆಗೆ ಬಿಎಸ್ಸಿ ಇನ್-ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹಾಗೂ ಒಂದು ಆರ್ಟ್ & ಕ್ರಾಫ್ಟ್ ಶಿಕ್ಷಕರ ಹುದ್ದೆಗೆ ಡಿಪ್ಲೋಮಾ ಇನ್-ಆರ್ಟ್ & ಕ್ರಾಫ್ಟ್ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 30ರೊಳಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆ ತಳಕಲ್ ಇಲ್ಲಿಗೆ ಸಲ್ಲಿಸಬೇಕು ಎಂದು ವಸತಿ ಶಾಲೆಯ ಪ್ರಾಶುಂಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.