ಕೊಪ್ಪಳ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕಾಗಿ ಎಸ್.ಎಚ್.ಪಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು. ವಸತಿ ನಿಲಯಗಳಲ್ಲಿ ಶೇ 75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ25ರಷ್ಟು ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ಮತ್ತು ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ರೂ 2.50 ಲಕ್ಷಗಳಿಗೆ, ಪ್ರವರ್ಗ-1ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ಒಂದು ಲಕ್ಷಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ರೂ 2.50 ಲಕ್ಷಗಳಿಗೆ ಮೀರಿರಬಾರದು.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ವೆಬ್‌ಸೈಟ್ https://shp.karnataka.gov.in/ ಅಥವಾ dom.karnataka.gov.in/koppal/public ನಲ್ಲಿ ಅರ್ಜಿಯೊಂದಿಗೆ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್, ಅಂಕಪಟ್ಡಿ ಹಾಗೂ ವಿದ್ಯಾರ್ಥಿ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಸಲ್ಲಿಸಬೇಕು. ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬಂಧಿಸಿದ ವಸತಿ ನಿಲಯಗಳಿಗೆ ನೀಡಲು ತಿಳಿಸಿದೆ. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಯಾವುದೇ ಅರ್ಜಿ ಕೋರಿಕೆಗಳನ್ನು ಪರಿಗಣಿಸಲಾಗುವುದಿಲ್ಲ.
ವಸತಿ ನಿಲಯಗಳ ವಿವರ: ಕೊಪ್ಪಳ ತಾಲೂಕಿನ ವಿದ್ಯಾರ್ಥಿ ನಿಲಯಗಳಾದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ವಿಜಯನಗರ ಬಡಾವಣೆ, ಬಾಲಕಿಯರ ವಸತಿ ನಿಲಯ ಗಣೇಶ ತೆಗ್ಗು, ಬಾಲಕಿಯರ ವಸತಿ ನಿಲಯ ಕೊಪ್ಪಳ, ಬಾಲಕರ ವಸತಿ ನಿಲಯ ಬಿಲಾಲ ನಗರ (ಕೋರ್ಟ ಹಿಂದುಗಡೆ), ಬಾಲಕರ ವಸತಿ ನಿಲಯ ಕಲ್ಯಾಣ ನಗರ, ಕುಷ್ಟಗಿ ತಾಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ, ಈ ಎಲ್ಲಾ ನಿಲಯಗಳಲ್ಲಿ ಸ್ಥಾನಗಳು ಲಭ್ಯವಿದ್ದು, ಅರ್ಹ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ತಮ್ಮ ಹತ್ತಿರ ವಸತಿ ನಿಲಯಗಳಿಗೆ ಭೇಟಿ ನೀಡಿ, ಮಾಹಿತಿ ಪಡೆಯಬಹುದಾಗಿದೆ ಎಂದು ಕೊಪ್ಪಳ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಯಾದ ರವಿ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.