ನಿನ್ನೆ ನಡೆದ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗದುಕೊಂಡಿದ್ದು, ರಾಜ್ಯದ ಮಹಿಳೆಯರಿಗೆ ಸಿಎಂ ಅವರು ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಂಬರುವ ವರ್ಷ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡ್ತಿವಿ’ ಎಂದು ಮಾಧ್ಯಮದವರಿಗೆ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಜಾರಿಗೆ ಬಂದಿರುವ ಹಿನ್ನಲೆಯಲ್ಲಿ, ಈಗ ಹಣ ಹೊಂದಿಸುವುದು ಕಷ್ಟಕರ ಆಗಿರುವುದರಿಂದ ಮುಂದಿನ ವರ್ಷ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಭರವಸೆ ನೀಡಿದ್ದಾರೆ.