ಬೆಂಗಳೂರು : ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿಗೆ ರೂ.34 ಯಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ 170 ರೂ. ಹಣ ವರ್ಗಾವಣೆಯಾಗಲಿದೆ.
ಈ ಬಗ್ಗೆ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪ್ರತಿ ಕೆ.ಜಿಗೆ 34 ರೂ. ಅಂತೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಹಣ ವರ್ಗಾಯಿಸಲು ಆದೇಶ ಹೊರಡಸಿದೆ ಎಂದು ತಿಳಿದು ಬಂದಿದೆ.